Wednesday, August 12, 2026

BDA Apartments

Home Front Page ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು…

ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು…

ಬೆಳಗಾವಿ,ಏಪ್ರಿಲ್,5,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು  ಗೋಕಾಕ್ ತಾಲ್ಲೂಕು ವೈದ್ಯ ಡಾ.ರವೀಂದ್ರ ಸ್ಪಷ್ಟ ಪಡಿಸಿದ್ದಾರೆ.Illegally,Sand,carrying,Truck,Seized,arrest,driver

ರಮೇಶ್ ಜಾರಕಿಹೊಳಿ ಅವರಿಗೆ ಏಪ್ರಿಲ್ 1ರಂದೇ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದುವರೆಗೆ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ನಿನ್ನೆ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬುದಾಗಿ ತಿಳಿಸಿದ್ದಾರೆ.Corona Positive - Ramesh jarakiholi-Treatment - ICU.

ಬಿಪಿ ಶುಗರ್ ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ರಮೇಶ್ ಜಾರಕಿಹೊಳಿ ಆಸ್ಪತ್ರೆಗೆ ದೌಡಾಯಿಸಿ ದಾಖಲಾಗಿದ್ದಾರೆ. ನಿನ್ನೆ ಬಂದಾಗ ಉಸಿರಾಟದ ತೊಂದರೆ ಆಕ್ಸಿಜನ್ ಲೆವೆಲ್ ಕಡಿಮೆ ಇತ್ತು. ಹೀಗಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಮೇಲೆ ಅವರು ಆಸ್ಪತ್ರೆಯಲ್ಲಿ ಎಷ್ಟು ದಿನ ಇರಬೇಕು ಎಂದು ನಿರ್ಧರಿಸುತ್ತೇವೆ ಎಂದು ವೈದ್ಯ ರವೀಂದ್ರ ತಿಳಿಸಿದ್ದಾರೆ.

Key words: Corona Positive – Ramesh jarakiholi-Treatment – ICU.