Tuesday, August 18, 2026

BDA Apartments

Home Front Page ಬಸವ ಕಲ್ಯಾಣದಲ್ಲಿ ಬಿಜೆಪಿಗೆ ದಾಖಲೆಯ ವಿಜಯ – ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ…

ಬಸವ ಕಲ್ಯಾಣದಲ್ಲಿ ಬಿಜೆಪಿಗೆ ದಾಖಲೆಯ ವಿಜಯ – ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ…

ಹುಮ್ನಾಬಾದ್,ಏಪ್ರಿಲ್,7,2021(www.justkannada.in):  ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಬಹುದೊಡ್ಡ ಅಂತರದಲ್ಲಿ ಜಯಗಳಿಸಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.Illegally,Sand,carrying,Truck,Seized,arrest,driver

ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಚುನಾವಣೆಯಲ್ಲಿ ಜನರ ದೃಷ್ಟಿಕೋನ ಬದಲಾಗಿದ್ದು,  ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಯ ಬೆಂಬಲಿಗರು ಬಿಜೆಪಿ ಪರ ಒಲವು ತೋರಿಸುತ್ತಿದ್ದಾರೆ.  ನಿರೀಕ್ಷೆಗೂ ಮೀರಿ ಜನ ಬೆಂಬಲ ಬಿಜೆಪಿಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಈ ಹಿಂದಿನ‌ ಎಲ್ಲ ದಾಖಲೆಗಳನ್ನು ಮುರಿದು ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಬಸವ ಕಲ್ಯಾಣದಲ್ಲಿ ಚುನಾಯಿತರಾಗುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.Record -victory -BJP - Basava kalyana-by-election-Home Minister -Basavaraja Bommai -confident

ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಗೆದ್ದೇ ಗೆಲ್ತಾರೆ.  ಅಮಿತ್ ಶಾ ಬೆಳಗಾವಿಗೆ ಬಂದಾಗ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಭಾಗಿಯಾಗಿದ್ದ ಲಕ್ಷಾಂತರ ಜನತೆಯೇ ಇದಕ್ಕೆ ಸಾಕ್ಷಿ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.

Key words: Record -victory -BJP – Basava kalyana-by-election-Home Minister -Basavaraja Bommai -confident