Tuesday, September 29, 2026

BDA Apartments

ಬೇಸಿಗೆ ಹಿನ್ನೆಲೆ : ಕೆಲ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯ ಬದಲಾವಣೆ… BDA JK_Adv BDA Adv
Home Front Page ಬೇಸಿಗೆ ಹಿನ್ನೆಲೆ : ಕೆಲ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯ ಬದಲಾವಣೆ….

ಬೇಸಿಗೆ ಹಿನ್ನೆಲೆ : ಕೆಲ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯ ಬದಲಾವಣೆ….

ಬೆಂಗಳೂರು,ಏಪ್ರಿಲ್,11,2021(www.justkannada.in): ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರುಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯವನ್ನ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Sanskrit Vivia,8th event,30 people,Ph.D,43graduates,M.Phil,Awarded 

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರುಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ 12 ರಿಂದ ಜಾರಿಗೆ ಬರುವಂತೆ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಿ ಕಛೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.summer-office-work-hours-change-some-districts

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಕಛೇರಿ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನ  ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಹಾಗೆಯೇ  ಜಿಲ್ಲಾಧಿಕಾರಿಗಳು ಮತಯ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಕೆಲಸ ನಿರ್ವಹಿಸಲು ಸೂಚಿಸಿದ ಸಂದರ್ಭದಲ್ಲಿ(ವೀಶೇಷವಾಗಿ ಕೋವಿಡ್-19) ಕಛೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Key words: Summer – Office work- hours- change – some districts.