Sunday, September 20, 2026

BDA Apartments

ಸಿಎಂ ಬಿಎಸ್ ವೈಗೆ ಕೊರೋನಾ: ಶೀಘ್ರ ಗುಣಮುಖರಾಗಲೆಂದು ಸಿದ್ದರಾಮಯ್ಯ ಸೇರಿ ಹಲವ...
Home Front Page ಸಿಎಂ ಬಿಎಸ್ ವೈಗೆ ಕೊರೋನಾ: ಶೀಘ್ರ ಗುಣಮುಖರಾಗಲೆಂದು  ಸಿದ್ದರಾಮಯ್ಯ ಸೇರಿ ಹಲವರಿಂದ ಶುಭ ಹಾರೈಕೆ…

ಸಿಎಂ ಬಿಎಸ್ ವೈಗೆ ಕೊರೋನಾ: ಶೀಘ್ರ ಗುಣಮುಖರಾಗಲೆಂದು  ಸಿದ್ದರಾಮಯ್ಯ ಸೇರಿ ಹಲವರಿಂದ ಶುಭ ಹಾರೈಕೆ…

ಬೆಂಗಳೂರು,ಏಪ್ರಿಲ್,16,2021(www.justkannada.in): ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಸಿಎಂ ಯಡಿಯೂರಪ್ಪ ಅವರು 2ನೇ ಬಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಲೆಂದು ಸಿದ್ದರಾಮಯ್ಯ ಸೇರಿ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ.

 ಮಾಜಿ ಸಿಎಂ ಸಿದ್ದರಾಮಯ್ಯ ಶುಭಹಾರೈಕೆ…

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಶೀಘ್ರ ಅವರು ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಹಾಗೆಯೇ ಕೊರೊನಾ ಸೋಂಕು ಪೀಡಿತರಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಕೊರೊನಾದಿಂದ ಚೇತರಿಸಿಕೊಂಡು ಎಂದಿನಂತೆ ಆಡಳಿತದಲ್ಲಿ ಸಕ್ರಿಯರಾಗುವಂತೆ ಭಗವಂತನಲ್ಲಿ ಕೋರುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.Corona - CM BS Yeddyurappa- speedy recovery- former cm-Siddaramaiah-

 ಸಚಿವ ಕೆ.ಎಸ್ ಈಶ್ವರಪ್ಪ ಹಾರೈಕೆ

ಇಂದು ಸನ್ಮಾನ್ಯ ಮುಖ್ಯಮಂತ್ರಿಗಳು ನಮ್ಮ ನಾಯಕರೂ, ರೈತ ಹೋರಾಟಗಾರರಾದ ಬಿ.ಎಸ್ ಯಡಿಯೂರಪ್ಪರವರಿಗೆ ಕೊರೊನಾ ಪಾಸಿಟಿವ್ ಎಂಬ ವಿಚಾರವನ್ನು ಮಾಧ್ಯಮಗಳ ಮೂಲಕ ತಿಳಿದೆ. ನಿರಂತರವಾಗಿ ರಾಜ್ಯದ ಏಳಿಗೆಗಾಗಿ ಶ್ರಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳು ಶೀಘ್ರವಾಗಿ ಗುಣಮುಖರಾಗಿ ಮತ್ತೇ ಜನಸೇವೆಗೆ ಮರುಳುವಂತಾಗಲಿ ಎಂದು ಶುಭ ಹಾರೈಸುತ್ತೇನೆ. ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

 

Key words: Corona – CM BS Yeddyurappa- speedy recovery- former cm-Siddaramaiah-