Thursday, September 17, 2026

BDA Apartments

ರಾಜೀನಾಮೆ ನೀಡಿರುವ ಐವರು ಶಾಸಕರು ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ BDA JK_Adv ...
Home Front Page ರಾಜೀನಾಮೆ ನೀಡಿರುವ ಐವರು ಶಾಸಕರು ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ

ರಾಜೀನಾಮೆ ನೀಡಿರುವ ಐವರು ಶಾಸಕರು ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಜುಲೈ 07, 2019 (www.justkannada.in): ರಾಜೀನಾಮೆ ನೀಡಿರುವ ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ.ಆದರೆ, ಎಲ್ಲಾ ಮಾಹಿತಿ ಬಹಿರಂಗಪಡಿಸುವುದಿಲ್ಲ. ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ನನ್ನ ಮೇಲೆ ನಿಷ್ಠರಾಗಿದ್ದಾರೆ ಎಂಬುದು ಪ್ರಶ್ನೆಯಲ್ಲ, ಎಲ್ಲರೂ ಕೂಡಾ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿ ರಾಜೀನಾಮೆ ನೀಡಿದ್ದು, ಅವರ ಕುಮ್ಮಕ್ಕಿನಿಂದಲೇ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಗೆ ದೂರು ನೀಡಿದ್ದಾರೆ.

ಇನ್ನು ರಾಜ್ಯ ರಾಜಕೀಯ ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದು, ಅತೃಪ್ತ ಶಾಸಕರ ಸಮಸ್ಯೆ ಆಲಿಸುವಂತೆ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿ. ಕೆ. ಹರಿಪ್ರಸಾದ್ ಅವರಿಗೆ ಜವಾಬ್ದಾರಿ ನೀಡಿದ್ದಾರೆ.