ಬೆಂಗಳೂರು, ಮೇ 01, 2021 (www.justkannada.in): ನಟ ಪವನ್ ಕಲ್ಯಾಣ್ ಸಿನಿಮಾ ಕೆಲಸದಿಂದ ಸ್ವಲ್ಪ ಸಮಯ ದೂರವಿರಲು ನಿರ್ಧರಿಸಿದ್ದಾರೆ.
ಒಂದು ತಿಂಗಳ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದು, ಅದಕ್ಕಾಗಿ ಅವರು ಯಾವುದೇ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪವನ್ ತಿಳಿಸಿದ್ದಾರೆ.
ಅಂದಹಾಗೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಪವನ್ ಕಲ್ಯಾಣ್ ಚಿಕಿತ್ಸೆ ಪಡೆದು ಇದೀಗ ಚೇತರಿಸಿಕೊಂಡಿದ್ದಾರೆ.
ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಪವನ್ ಈ ನಿರ್ಧಾರಕ್ಕೆ ಬಂದಿದ್ದಾರೆ.






