Sunday, September 13, 2026

BDA Apartments

ಸ್ಪೀಕರ್ ರಮೇಶ್ ಕುಮಾರ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ… B...
Home Front Page ಸ್ಪೀಕರ್ ರಮೇಶ್ ಕುಮಾರ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ…

ಸ್ಪೀಕರ್ ರಮೇಶ್ ಕುಮಾರ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ…

ಬೆಂಗಳೂರು,ಜು,11,2019(www.justkannada.in):  ಅತೃಪ್ತ ಶಾಸಕರ ರಾಜಿನಾಮೆ ವಿಚಾರವನ್ನು ತ್ವರಿತ ಗತಿಯಲ್ಲಿ ಇತ್ಯಾರ್ಥ ಮಾಡಲು ಆಗಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ.

ಈ ಸಂಬಂಧ  ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಸ್ಪೀಕರ್ ರಮೇಶ್ ಕುಮಾರ್  ಮನವಿ ಮಾಡಿದ್ದಾರೆ. ಶಾಸಕರು ಸ್ವ- ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರಾ .. ? ಇಲ್ಲವೊ ? ಎನ್ನುವ ಬಗ್ಗೆ ವಿಚಾರಣೆ ನಡೆಸಬೇಕಿದೆ. ಈ ಹಿನ್ನೆಲೆ ಶಾಸಕರ ರಾಜೀನಾಮೆಯ ಬಗ್ಗೆ ಇಂದು ಸಂಜೆ ವೇಳೆಗೆ ಇತ್ಯಾರ್ಥ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ.

ಈ ನಡುವೆ ಸ್ಪೀಕರ್ ಅವರ ಅರ್ಜಿಯನ್ನ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ವಿಚಾರಣೆಯನ್ನ ನಾಳೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

Key words: Supreme Court – hear -Speaker Ramesh Kumar’s- petition