Tuesday, September 29, 2026

BDA Apartments

ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿ...
Home Front Page ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.

ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.

ಬೆಳಗಾವಿ,ಜೂನ್,4,2021(www.justkannada.in):  ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಮಾತಿನ ಸಂಘರ್ಷ ಮುಂದುವರೆದಿದ್ದು ಈ ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.jk

ಬೆಳಗಾವಿಯಲ್ಲಿ ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಭಿನ್ನಾಭಿಪ್ರಾಯ ಸರಿಪಡಿಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಸಮಸ್ಯೆ ಬಗೆಹರಿಸಲು ಏನು ಮಾಡಬೇಕೋ ಅದನ್ನ ಮಾಡ್ತೇವೆ. ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿರು ಮೈಸೂರಿಗೆ ತೆರಳಿದ್ದಾರೆ. ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯ ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದರು.

Key words: Conflict -issue -IAS officers –Mysore-CM BS yeddyurappa