Friday, August 7, 2026

BDA Apartments

Home Front Page ಇಂದು ಮೈಸೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು…

ಇಂದು ಮೈಸೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು…

ಮೈಸೂರು,ಜು,12,2019(www.justkannada.in): ಮೈಸೂರಿನಲ್ಲಿ ಇರುವ ಭಾರತೀಯ ಭಾಷಾ ಸಂಸ್ಥೆಯ ಸ್ವರ್ಣ ಮಹೋತ್ಸವಕ್ಕಾಗಿ  ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು ಮೈಸೂರಿಗೆ ಆಗಮಿಸಲಿದ್ದಾರೆ.

‌ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಸಂಜೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಾಳೆ ನಡೆಯಲಿರುವ ಭಾರತೀಯ ಭಾಷಾ ಸಂಸ್ಥೆಯ ಸ್ವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮೈಸೂರಿನಲ್ಲಿ ಇರಲಿದ್ದಾರೆ.

Key words: Vice President – Venkaiahnaydu -Mysore- today