Sunday, August 23, 2026

BDA Apartments

Home Front Page ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ

ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ

ನವದೆಹಲಿ, ಜೂನ್ 06, 2021 (www.justkannada.in): ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದೆ.

ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.

ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ.  ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,46,759ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,77,799ಕ್ಕೆ ಏರಿಕೆಯಾಗಿದೆ.