Sunday, August 23, 2026

BDA Apartments

Home Front Page Good News: ಸತತ 2ನೇ ದಿನವೂ ದೇಶದಲ್ಲಿ ಲಕ್ಷಕ್ಕಿಂತ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ

Good News: ಸತತ 2ನೇ ದಿನವೂ ದೇಶದಲ್ಲಿ ಲಕ್ಷಕ್ಕಿಂತ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು, ಜೂನ್ 09, 2021 (www.justkannada.in): ಭಾರತದಲ್ಲಿ ಸತತ್ ಎರಡನೇ ದಿನವೂ ಲಕ್ಷಕ್ಕಿಂತ ಕೆಳಗೆ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ.

ಹೌದು. ದೇಶದಲ್ಲಿ ಕೊರೋನಾ 2ನೇ ಅಲೆಯ ಪ್ರಭಾವ ಮತ್ತಷ್ಟು ಕಡಿಮೆಯಾಗುತ್ತಿದೆ.

24 ಗಂಟೆಗಳ ಅವಧಿಯಲ್ಲಿ 92,596 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 2,219 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,90,89,069ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,53,528ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 12,31,415ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1,62,664 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,75,04,126ಕ್ಕೆ ತಲುಪಿದೆ.