Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬೆಂಕಿ ಇಲ್ಲದೆ ಹೊಗೆಯಾಡದು- ಸಿಎಂ ಬದಲಾವಣೆ ಇಲ್ಲ ಎಂಬ ಅರುಣ್ ಸಿಂಗ್ ಹೇಳಿಕೆಗೆ ಸಿದ್ಧರಾಮಯ್ಯ ಟೀಕೆ.

ಬೆಂಕಿ ಇಲ್ಲದೆ ಹೊಗೆಯಾಡದು- ಸಿಎಂ ಬದಲಾವಣೆ ಇಲ್ಲ ಎಂಬ ಅರುಣ್ ಸಿಂಗ್ ಹೇಳಿಕೆಗೆ ಸಿದ್ಧರಾಮಯ್ಯ ಟೀಕೆ.

ಬೆಂಗಳೂರು,ಜೂನ್,10,2021(www.justkannada.in): ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ, ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.jk

ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಯಡಿಯೂರಪ್ಪ ಅವರನ್ನು ಬದಲಿಸಿ ಎಂದು ನಾವ್ಯಾರೂ ಒತ್ತಾಯ ಮಾಡಿಲ್ಲ. ಆ ಬಗ್ಗೆ ಚರ್ಚೆ ನಡೆಯುತ್ತಿದೆ ದೆಹಲಿಯಲ್ಲಿ ಎಂದು ಹೇಳಿದ್ದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದಾದರೆ ಶಾಸಕರಾದ ಬಸನಗೌಡ ಯತ್ನಾಳ್, ಅರವಿಂದ ಬೆಲ್ಲದ್, ವಿಶ್ವನಾಥ್, ರೇಣುಕಾಚಾರ್ಯ ಹಾಗೂ ಸಚಿವ ಯೋಗೀಶ್ವರ್ ವಿರುದ್ಧ ಏಕೆ ಬಿಜೆಪಿ ಹೈ ಕಮಾಂಡ್ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಎರಡೂ ದುರ್ಬಲ. ಅರುಣ್ ಸಿಂಗ್ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ಹಾಗಾದರೆ ಬದಲಾವಣೆ ಆಗಬೇಕು ಎಂದವರ ವಿರುದ್ಧ ಏಕೆ ಕ್ರಮವಿಲ್ಲ. ಇದರಿಂದ ರವಾನೆಯಾಗುವ ಸಂದೇಶ ಏನು ? ಯಡಿಯೂರಪ್ಪ ಅವರೇ ಕಳಪೆ ಮುಖ್ಯಮಂತ್ರಿ. ಇನ್ನು ಬೇರೆಯವರು ಹೇಗಿರಬೇಕು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

Key words: former CM-Siddaramaiah- BJP – in charge-Arun Singh-statement – no -CM -change.