Friday, August 21, 2026

BDA Apartments

Home Front Page ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಕ್ವಾರಂಟೈನ್ ಮುಗಿಸಿ ಪ್ರಾಕ್ಟೀಸ್ ಆರಂಭಿಸಿದ ಟೀಂ ಇಂಡಿಯಾ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಕ್ವಾರಂಟೈನ್ ಮುಗಿಸಿ ಪ್ರಾಕ್ಟೀಸ್ ಆರಂಭಿಸಿದ ಟೀಂ ಇಂಡಿಯಾ

ಬೆಂಗಳೂರು, ಜೂನ್ 11, 2021 (www.justkannada.in): ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.

ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಸೌಥ್ ಹ್ಯಾಂಪ್ಟನ್ ಮೈದಾನದಲ್ಲಿ ಪ್ರಾಕ್ಟೀಸ್ ಶುರು ಮಾಡಿದ್ದು, ಜೂನ್ 18ರಿಂದ ನ್ಯೂಜಿಲ್ಯಾಂಡ್ ವಿರುದ್ಧ ಸೆಣೆಸಾಡಲಿದೆ.

ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಭಾರತಕ್ಕೆ ಚಾಂಪಿಯನ್ ಶಿಪ್ ಫೈನಲ್ ಅತ್ಯಂತ ಮಹತ್ವದ್ದಾಗಿದೆ.

ಕೋವಿಡ್ ನಿಯಮದ ಪ್ರಕಾರ ಕ್ವಾರಂಟೈನ್ ಅವಧಿಯನ್ನು ಪೂರೈಸಿರುವ ಟೀಂ ಇಂಡಿಯಾ ಆಟಗಾರರು ಮೈದಾನಕ್ಕಿಳಿದ ತಂಡದ ಆಟಗಾರರು ನೆಟ್ ಅಭ್ಯಾಸ ಆರಂಭಿಸಿದ್ದಾರೆ.