Saturday, September 12, 2026

BDA Apartments

ಮಣ್ಣಲ್ಲಿ ಮಣ್ಣಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ BDA JK_Adv BDA Adv
Home Cinema ಮಣ್ಣಲ್ಲಿ ಮಣ್ಣಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್.

ಮಣ್ಣಲ್ಲಿ ಮಣ್ಣಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್.

ಚಿಕ್ಕಮಗಳೂರು,ಜೂನ್, 15,2021(www.justkannada.in): ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ  ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ನೆರವೇರಿತು.jk

ಸ್ನೇಹಿತ ರಘು ಅವರ ತೋಟದಲ್ಲಿ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಪೊಲೀಸ್ ಗೌರವದೊಂದಿಗೆ ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀಗಳ ನೇತೃತ್ವದಲ್ಲಿ  ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆ ನೆರವೇರಿತು. ನಟ ಸಂಚಾರಿ ವಿಜಯ್ ಅವರ ಸಹೋದರರು ಅಂತಿಮ ವಿಧಿವಿಧಾನ ನೆರವೇರಿಸಿದರು.

ಇದಕ್ಕೂ ಮೊದಲು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಟನಟಿಯರು, ಕಲಾವಿದರು, ರಾಜಕೀಯ ನಾಯಕರು ಸೇರಿ ಗಣ್ಯಾತೀಗಣ್ಯರು ಅಂತಿಮ ದರ್ಶನ ಪಡೆದರು. ನಂತರ ಪಾರ್ಥೀವ ಶರೀರವನ್ನ ಪಂಚನಹಳ್ಳಿಗೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತು. ಬಳಿಕ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

Key words: actor -Sanchari –Vijay-death- funeral-panchanahalli