Monday, September 28, 2026

BDA Apartments

ಅಸಮಾಧಾನ ಬೆಳವಣಿಗೆಗೆ ಬ್ರೇಕ್ ಹಾಕುವ ಕೆಲಸ ನಡೆಯುತ್ತೆ- ಡಿಸಿಎಂ ಅಶ್ವಥ್ ನಾರ...
Home Front Page ಅಸಮಾಧಾನ ಬೆಳವಣಿಗೆಗೆ ಬ್ರೇಕ್ ಹಾಕುವ ಕೆಲಸ ನಡೆಯುತ್ತೆ- ಡಿಸಿಎಂ ಅಶ್ವಥ್ ನಾರಾಯಣ್.

ಅಸಮಾಧಾನ ಬೆಳವಣಿಗೆಗೆ ಬ್ರೇಕ್ ಹಾಕುವ ಕೆಲಸ ನಡೆಯುತ್ತೆ- ಡಿಸಿಎಂ ಅಶ್ವಥ್ ನಾರಾಯಣ್.

ಬೆಂಗಳೂರು,ಜೂನ್,16,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಮತ್ತೆ ಚರ್ಚೆಯಾಗುತ್ತಿದ್ದು, ಈ ಮಧ್ಯೆ ಇಂದು ರಾಜ್ಯಕ್ಕೆ ಆಗಮಿಸಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶಾಸಕರು  ಸಚಿವರ ಜತೆ ಸಭೆ ನಡೆಸಲಿದ್ದಾರೆ. jk

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ಅಶ್ವಥ್ ನಾರಾಯಣ್,  ಪಕ್ಷದಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶವಿದೆ. ಏನೇ ವ್ಯತ್ಯಾಸವಾದರೂ ಯಾರು ಬಹಿರಂಗ ಹೇಳಿಕೆ ಕೊಡಬಾರದು. ಅಸಮಾಧಾನ ಬೆಳವಣಿಗೆಗೆ ಬ್ರೇಕ್ ಹಾಕುವ ಕೆಲಸ ನಡೆಯುತ್ತದೆ ಎಂದು ಹೇಳಿದರು.

ನಮ್ಮದು ವ್ಯಕ್ತಿಗತ ಪಕ್ಷ ಅಲ್ಲ. ಕಾರ್ಯಕರ್ತರ ಪಕ್ಷ. ನಾವು ಯಾರಿಗೂ ಭಾರ ಆಗಬಾರದು. ನಮ್ಮಿಂದ ಪಕ್ಷಕ್ಕೆ ಬೇರೆಯವರಿಗೆ ತೊಂದರೆಯಾಗಬಾರದು. ದೊಡ್ಡವರಾಗಲಿ, ಚಿಕ್ಕವರಾಗಲಿ ಪಕ್ಷದ ಚೌಕಟ್ಟಿನಲ್ಲಿ ನಡೆಯಬೇಕು ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

Key words: DCM -Ashwath Narayan-bjp- Confusion-break