Saturday, August 15, 2026

BDA Apartments

Home Front Page ಡಿಸೆಂಬರ್‌’ವರೆಗೆ ಜಿಪಂ, ತಾಪಂ ಚುನಾವಣೆ ನಡೆಸಲ್ಲ: ಸಚಿವ ಕೆ.ಎಸ್‌. ಈಶ್ವರಪ್ಪ ಸ್ಪಷ್ಟನೆ

ಡಿಸೆಂಬರ್‌’ವರೆಗೆ ಜಿಪಂ, ತಾಪಂ ಚುನಾವಣೆ ನಡೆಸಲ್ಲ: ಸಚಿವ ಕೆ.ಎಸ್‌. ಈಶ್ವರಪ್ಪ ಸ್ಪಷ್ಟನೆ

ಬೆಂಗಳೂರು, ಜೂನ್ 19, 2021 (www.justkannada.in): ಡಿಸೆಂಬರ್‌ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

 ‘ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಸುದ್ದಿಗಾರರಿಗೆ ಮಾತನಾಡಿದ ಅವರು, ಡಿಸೆಂಬರ್‌ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ. ಚುನಾವಣೆ ನಡೆಸಿ ಜನರ ಜೀವದ ಜತೆ ಆಟವಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿ ಕಲಹ ಕುರಿತಂತೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ರಾಷ್ಟ್ರೀಯ ನಾಯಕರು ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ ಎಂದರು.