Sunday, August 23, 2026

BDA Apartments

Home Cinema ಹ್ಯಾಟ್ರಿಕ್ ಹೀರೋ ಅಭಿಮಾನಿಗಳಿಗೆ ಗುಡ್ ನ್ಯೂಸ್!

ಹ್ಯಾಟ್ರಿಕ್ ಹೀರೋ ಅಭಿಮಾನಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು, ಜೂನ್ 24, 2021 (www.justkannada.in): ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಹೊರಬಿದ್ದಿದ್ದು, ”ಭಜರಂಗಿ -2” ಆಗಸ್ಟ್ ನಲ್ಲಿ ಸೆಟ್ಟೇರಲಿದೆ.

ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಚಿತ್ರ ಭಜರಂಗಿ-2 ಸಿನಿಮಾ ಶೇ.60 ರಷ್ಟು ಪೂರ್ಣಗೊಂಡಿದ್ದು, ಉಳಿದ ಭಾಗದ ಚಿತ್ರೀಕರಣ ಆಗಸ್ಟ್ ನಲ್ಲಿ ಸೆಟ್ಟೇರಲಿದೆ.

ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ನಿಟ್ಟಿನಲ್ಲಿ ಚಿತ್ರತಂಡ ಕೆಲಸ ಮಾಡುತ್ತಿತ್ತು. ಇದೀಗ ಚಿತ್ರದ ಶೂಟಿಂಗ್ ಮುಂದುವರಿಸಲು ಸಿದ್ಧತೆ ನಡೆಸಲಾಗಿದೆ.

ಸಿನಿಮಾ ಬಿಡುಗಡೆ ಸಂಬಂಧ ಸರ್ಕಾರ ಥಿಯೇಟರ್ ಗಳಲ್ಲಿ ಶೇ.100 ರಷ್ಟು ಸೀಟಿಗೆ ಅನುಮತಿ ನೀಡುತ್ತದೆಯೇ ಎಂಬುದರ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.