ಮೈಸೂರಿ‌ನಲ್ಲಿ ತೆರಿಗೆ ಪಾವತಿದಾರರಿಗೆ ನೀಡಿದ್ದ ರಿಯಾಯಿತಿ ವಿಸ್ತರಣೆ.

ಮೈಸೂರು,ಜೂನ್,24,2021(www.justkannada.in): ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅನುಕೂಲವಾಗುವ ದೃಷ್ಠಿಯಿಂದ ಜೂನ್ 2021ರವರೆಗೆ ನೀಡಲಾಗಿದ್ದ ರಿಯಾಯಿತಿಯನ್ನ ವಿಸ್ತರಣೆ ಮಾಡಲಾಗಿದೆ.

ತೆರಿಗೆ ರಿಯಾಯಿತಿ ವಿಸ್ತರಣೆ ಮಾಡಿ  ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ತೆರಿಗೆ ಪಾವತಿದಾರರಿಗೆ ಶೇ.5ರಷ್ಟು ರಿಯಾಯಿತಿ ಘೋಷಿಸಿತ್ತು. ಇದೀಗ ಜೂನ್ 2021ರ ವರೆಗೆ ನೀಡಿದ್ದ ರಿಯಾಯಿತಿ ಜುಲೈ 2021ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಆಸ್ತಿ ತೆರಿಗೆದಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಆದೇಶದಲ್ಲಿ ಮನವಿ ಮಾಡಿದ್ದಾರೆ.

Key words: Extension – concession – tax payers –Mysore-city-corporation