Monday, August 10, 2026

BDA Apartments

Home Front Page ಶಾಲೆ ಆರಂಭದ ಬಗ್ಗೆ ಸೋಮವಾರ ಅಂತಿಮ ತೀರ್ಮಾನ- ಶಿಕ್ಷಣ ಸಚಿವ ಸುರೇಶ್ ಕುಮಾರ್.

ಶಾಲೆ ಆರಂಭದ ಬಗ್ಗೆ ಸೋಮವಾರ ಅಂತಿಮ ತೀರ್ಮಾನ- ಶಿಕ್ಷಣ ಸಚಿವ ಸುರೇಶ್ ಕುಮಾರ್.

ಬೆಂಗಳೂರು,ಜೂನ್,25,2021(www.justkannada.in): ಶಾಲೆ ಆರಂಭದ ಬಗ್ಗೆ ಸೋಮವಾರ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.jk

ಶಾಲಾ ಆರಂಭದ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಇಂದು ಸಚಿವ ಸುರೇಶ್ ಕುಮಾರ್ ಸಭೆ ನಡೆಸಿ ಚರ್ಚಿಸಿದರು.  ಶಾಲೆಗೆ ಆಗಮಿಸಲು ವಿದ್ಯಾರ್ಥಿಗಳು ಕಾತರರಾಗಿದ್ದಾರೆ. ಕಳೆದ 15 ತಿಂಗಳಿಂದಲೂ ವಿದ್ಯಾರ್ಥಿಗಳು ಶಾಲಾ ಮುಖ ನೋಡಿಲ್ಲ.  ಹೀಗಾಗಿ ಶಾಲೆ ಆರಂಭಿಸಿ. ಶಾಲೆ ಆರಂಭದ ಬಗ್ಗೆ ಯೋಜನೆ ರೂಪಿಸುವಂತೆ ಸಚಿವ ಸುರೇಶ್ ಕುಮಾರ್ ಗೆ ಜಿಲ್ಲಾ ನಿರ್ದೇಶಕರು ಮನವಿ ಮಾಡಿದರು.

ಸಭೆ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್, ಶಾಲೆ ಆರಂಭದ ಬಗ್ಗೆ ಸೋಮವಾರ ಅಂತಿಮ ತೀರ್ಮಾನ ಮಾಡುತ್ತೇವೆ. ಆರೋಗ್ಯ ಇಲಾಖೆ ಜತೆ ಚರ್ಚಿಸಿ ಅಂತಿಮ  ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯ ರಾಜ್ಯದಲ್ಲಿ ವಿದ್ಯಾಗಮ ಆರಂಭಿಸಿದ್ದೇವೆ. ಕಲಿಕಾ ದಿನಚರಿ ಬಗ್ಗೆ ಯೋಜನೆ ಮಾಡಿದ್ದೇವೆ. ಶಾಲಾ ಆರಂಭದ ಬಗ್ಗೆ  ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದರು.

Key words: Monday-final decision – start – school-Education Minister -Suresh Kumar.