Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Crime ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಕೇಸ್: ಫೈರಿಂಗ್ ಮಾಡಿ ಇಬ್ಬರು ಆರೋಪಿಗಳ  ಬಂಧನ.

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಕೇಸ್: ಫೈರಿಂಗ್ ಮಾಡಿ ಇಬ್ಬರು ಆರೋಪಿಗಳ  ಬಂಧನ.

ಬೆಂಗಳೂರು,ಜೂನ್,25,2021(www.justkannada.in):   ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.jk

ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು  ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದ ಕಟ್ಟೆ ಬಳಿ  ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿ  ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳಗ್ಗೆ ರೇಖಾ ಕದಿರೇಶ್ ಹತ್ಯೆ ನಡೆದಿದ್ದು ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಪೊಲೀಸರು ತಮ್ಮ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಗೆ ಆರಂಭದಲ್ಲಿ ಪೊಲೀಸರು ಶರಣಾಗುವಂತೆ ಹೇಳಿದರೂ ಕೇಳಲಿಲ್ಲ. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದು, ಆಗ ಅನಿವಾರ್ಯವಾಗಿ ಇನ್ಸ್ ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ಅವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಸೂರ್ಯ ಎ1, ಪೀಟರ್ ಎ2 ಆಗಿದ್ದಾನೆ.

Key words:  former corporator -Rekha Kadiresh- Murder -case -Arrest – two -accused