Sunday, August 23, 2026

BDA Apartments

Home Cinema ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿ: ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಟೀಕೆ

ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿ: ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಟೀಕೆ

ಬೆಂಗಳೂರು ಜುಲೈ 02, 2021 (www.justkannada.in):  ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿಯು ನಿರ್ದೇಶಕನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಿದೆ. ಇದನ್ನು ನಟಿ, ಮಾಜಿ ಸಂಸದೆ ರಮ್ಯಾ ಖಂಡಿಸಿದ್ದಾರೆ.

‘ನಾವು ನೋಡುವ ವಿಚಾರದ ಮೇಲು ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ ಸಿ) ಈಗಾಗಲೇ ಎಲ್ಲವನ್ನು ನಿಯಂತ್ರಣ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಈಗಾಗಲೇ ಕಾಯ್ದೆ ತಿದ್ದುಪಡಿಗೆ ನಟ ಫರ್ಹಾನ್ ಅಖ್ತರ್, ಅನುರಾಗ್ ಕಶ್ಯಪ್, ಶಬಾನಾ ಅಜ್ಮಿ, ಹನ್ಸಲ್ ಮೆಹ್ತಾ, ದಿಬಾಕರ್ ಬ್ಯಾನರ್ಜಿ, ಜೋಯಾ ಅಖ್ತರ್, ಕಮಲ್ ಹಾಸನ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.