Sunday, August 9, 2026

BDA Apartments

Home Crime ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು.

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು.

ಮೈಸೂರು,ಜುಲೈ,3,2021(www.justkannada.in): ಬರ್ತ್ ಡೇ ಪಾರ್ಟಿಗೆಂದು ತೆರಳಿದ್ದ ಇಬ್ಬರು ಯುವಕರು ಈಜಲು ಹೋಗಿ ನೀರುಪಾಲಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.jk

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಡಿಮಾಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಭಿಷೇಕ್ (21) ಅಂಕೇಶ್ (21) ಮೃತಪಟ್ಟವರು. ಮೃತ ಇಬ್ಬರು ಯುವಕರು ಮೂಲತಃ ಯಳಂದೂರು ತಾಲ್ಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಚಾಮರಾಜನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಮಧ್ಯೆ ತಡಿಮಾಲಂಗಿ ಗ್ರಾಮಕ್ಕೆ ಸ್ನೇಹತನ ಹುಟ್ಟುಹಬ್ಬಕ್ಕೆ ಆಗಮಿಸಿದ್ದ ಇಬ್ಬರು ಯುವಕರು ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು ವಿದ್ಯಾರ್ಥಿಗಳ ಮೃತದೇಹ ಇನ್ನು ಪತ್ತೆಯಾಗಿಲ್ಲ. ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದ್ದು ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-two-student-death-swimming- river