Wednesday, August 19, 2026

BDA Apartments

Home Crime ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು.

ಮೈಸೂರು,ಜುಲೈ,3,2021(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದ ಘಟನೆ ಮೈಸೂರಿನಲ್ಲಿ ನಡೆದಿದೆ.jk

ಮೈಸೂರು ಬೆಂಗಳೂರು ರಸ್ತೆಯ ದಂಡಿಮಾರಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಸದ್ಯ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರು ಬೆಂಗಳೂರಿನವರೆಂದು ಹೇಳಲಾಗಿದೆ.

ನಂಜನಗೂಡಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದ ಕುಟುಂಬ ಅಪಘಾತಕ್ಕೆ ಸಿಲುಕಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಎನ್.ಆರ್.ಠಾಣಾ ಪೊಲೀಸರು ಭೇಟಿ ನೀಡಿ ಪ್ರಯಾಣಿಕರ ನೆರವಿಗೆ ಬಂದಿದ್ದಾರೆ. ಕ್ರೇನ್ ಮೂಲಕ ಕಾರನ್ನ ಮೇಲಕ್ಕೆ ತೆಗೆಯಲಾಗಿದೆ. ಈ ಕುರಿತು ಎನ್.ಆರ್.ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- driver -lost -control – car-accident