Sunday, September 13, 2026

BDA Apartments

ದೇಶದ ಕೊರೊನಾ ಮೀಟರ್: ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ BDA JK_Adv BDA Adv
Home Front Page ದೇಶದ ಕೊರೊನಾ ಮೀಟರ್: ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ

ದೇಶದ ಕೊರೊನಾ ಮೀಟರ್: ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ

ಬೆಂಗಳೂರು, ಜುಲೈ 04, 2021 (www.justkannada.in): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 43,071 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 955 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,005ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,85,350 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,96,58,078 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 52,299 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.