Sunday, August 23, 2026

BDA Apartments

Home Front Page ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ: ಕೆಲವೆಡೆ ರೆಡ್ ಅಲರ್ಟ್

ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ: ಕೆಲವೆಡೆ ರೆಡ್ ಅಲರ್ಟ್

ಬೆಂಗಳೂರು, ಜುಲೈ 11, 2021 (www.justkannada.in):

ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ, ಚಿಂಚೋಳಿ, ಕಮಲಾಪುರ, ಯಡ್ರಾಮಿಯಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನಲ್ಲಿ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.