Tuesday, September 22, 2026

BDA Apartments

ಇಂದು ಟೀಂ ಇಂಡಿಯಾ- ಶ್ರೀಲಂಕಾ ನಡುವೆ 2ನೇ ಏಕದಿನ ಪಂದ್ಯ BDA JK_Adv BDA Adv
Home Front Page ಇಂದು ಟೀಂ ಇಂಡಿಯಾ- ಶ್ರೀಲಂಕಾ ನಡುವೆ 2ನೇ ಏಕದಿನ ಪಂದ್ಯ

ಇಂದು ಟೀಂ ಇಂಡಿಯಾ- ಶ್ರೀಲಂಕಾ ನಡುವೆ 2ನೇ ಏಕದಿನ ಪಂದ್ಯ

ಬೆಂಗಳೂರು, ಜುಲೈ 20, 2021 (www.justkannada.in): ಭಾರತ ಮತ್ತು ಶ್ರೀಲಂಕಾ ನಡುವೆ ಎರಡನೇ ಏಕದಿನ ಪಂದ್ಯ ಇಂದು ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೊದಲ ಪಂದ್ಯವನ್ನು ಏಳು ವಿಕೆಟ್‌ಗಳಿಂದ ಗೆದ್ದ ನಂತರ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸರಣಿ ಗೆಲುವಿನ ಆಸೆಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕಾದರೆ ಶ್ರೀಲಂಕಾ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಪಂದ್ಯ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ. ಸೋನಿ ಸಿಕ್ಸ್ / ಸೋನಿ ಸಿಕ್ಸ್ ಎಚ್ಡಿ, ಸೋನಿ ಟೆನ್ 3 / ಸೋನಿ ಟೆನ್ 3 ಎಚ್ಡಿ ಯಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಶ್ರೀಲಂಕಾ: ದಾಸುನ್ ಶಾನಕಾ (ಕ್ಯಾಪ್ಟನ್), ಧನಂಜಯ ಡಿ ಸಿಲ್ವಾ (ಉಪನಾಯಕ), ಅವಿಷ್ಕಾ ಫರ್ನಾಂಡೊ, ಭನುಕಾ ರಾಜಪಕ್ಸೆ, ಪಾತುಮ್ ನಿಸ್ಸಂಕ, ಚರಿತ್ ಅಸಲಂಕಾ, ವನಿಂದು ಹಸರಂಗ, ಆಶೆನ್ ಬಂಡರಾ, ಮಿನೋಡ್ ಭನುಕಾ, ಲಹಿರು ಉದಾರ, ಚಮೇಮರಾಮಾನಾ ಲಕ್ಷನ್ ಸಂದಕನ್, ಅಕಿಲಾ ಧನಂಜಯ, ಶಿರನ್ ಫರ್ನಾಂಡೊ, ಧನಂಜಯ ಲಕ್ಷನ್, ಇಶಾನ್ ಜಯರತ್ನ, ಪ್ರವೀಣ್ ಜಯವಿಕ್ರೆಮಾ, ಅಸಿಥಾ ಫರ್ನಾಂಡೊ, ಕಸುನ್ ರಾಜಿತಾ, ಲಹೀರು ಕುಮಾರ, ಇಸುರು ಉದಾನ.

ಭಾರತ: ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗೈಕ್ವಾಡ್, ಸೂರ್ಯಕುಮಾರ್ ಯಾದವ್ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್-ಕೀಪರ್),ಕೆ ಗೌತಮ್, ಕ್ರುನಾಲ್ ಪಾಂಡ್ಯ, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಹರ್, ಕುಲದೀಪ್ ಯಾದವ್, ನವದೀಪ್ ಸೈನಿ, ಚೇತನ್ ಸಕರಿಯಾ