Friday, August 14, 2026

BDA Apartments

Home Front Page ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರ- ಮಾಜಿ ಸಿಎಂ ಸಿದ್ದರಾಮಯ್ಯ.

ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರ- ಮಾಜಿ ಸಿಎಂ ಸಿದ್ದರಾಮಯ್ಯ.

ನವದೆಹಲಿ,ಜುಲೈ,20,2021(www.justkannada.in):  ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.jk

ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರ. ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದರು.

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ. ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ‌ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಸಿದ್ದರಾಮಯ್ಯ ತಿಳಿಸಿದರು.

ಇಂದು ಸಂಜೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Key words: congress- party – Split-far – truth-Former CM -Siddaramaiah.