Saturday, September 19, 2026

BDA Apartments

ಮಕ್ಕಳಿಗೆ ನೀಡುವ ಮೊಟ್ಟೆಗೂ ಕನ್ನ! ಶಶಿಕಲಾ ಜೊಲ್ಲೆ ವಿರುದ್ಧ ಎಐಸಿಸಿ ಪ್ರಧಾನ...
Home Front Page ಮಕ್ಕಳಿಗೆ ನೀಡುವ ಮೊಟ್ಟೆಗೂ ಕನ್ನ! ಶಶಿಕಲಾ ಜೊಲ್ಲೆ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್...

ಮಕ್ಕಳಿಗೆ ನೀಡುವ ಮೊಟ್ಟೆಗೂ ಕನ್ನ! ಶಶಿಕಲಾ ಜೊಲ್ಲೆ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಟೀಕೆ

ಬೆಂಗಳೂರು, ಜುಲೈ 24, 2021 (www.justkannada.in): ಸಚಿವೆ ಶಶಿಕಲಾ ಜೊಲ್ಲೆ ‘ಮೊಟ್ಟೆ ಕರ್ಮಕಾಂಡ’ವನ್ನು ಕಾಂಗ್ರೆಸ್ ಖಂಡಿಸಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ನಾಯಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

ಮಹಿಳಾ & ಮಕ್ಕಳ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರ ಲಂಚ ಪ್ರಕರಣ ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಭ್ರಷ್ಟಾಚಾರದ ಪ್ರಮಾಣವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದಿದ್ದಾರೆ.

ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ & ಅಪೌಷ್ಟಿಕತೆಯ ವಿರುದ್ಧ ಹೋರಾಡುವ ಬದಲು ಅದಕ್ಕಾಗಿ ಮೀಸಲಿರುವ ಹಣವನ್ನೇ ನಿರ್ಲಜ್ಜೆಯಿಂದ ಲೂಟಿ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.