Wednesday, August 5, 2026

BDA Apartments

Home Front Page ಮಂತ್ರಿಗಿರಿ ಸಿಗದಿದ್ರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ಧ ಆನಂದ್ ಮಾಮನಿ ‘ಯು ಟರ್ನ್’

ಮಂತ್ರಿಗಿರಿ ಸಿಗದಿದ್ರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ಧ ಆನಂದ್ ಮಾಮನಿ ‘ಯು ಟರ್ನ್’

 ಬೆಂಗಳೂರು,ಆಗಸ್ಟ್,4,2021(www.justkannada.in):  ಈ ಬಾರಿ ಸಚಿವ ಸ್ಥಾನ ಸಿಗದಿದ್ದರೇ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ಧ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ಇದೀಗ ಯು ಟರ್ನ್ ಹೊಡೆದಿದ್ದಾರೆ.

 ನೂತನ ಸಂಪುಟದಲ್ಲಿ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದ ಆನಂದ ಮಾಮನಿ ತಮ್ಮ ನಿರ್ಧಾರ ಬದಲಿಸಿದ್ದು, ರಾಜೀನಾಮೆ ನೀಡಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಬೊಮ್ಮಾಯಿ ಸಂಪುಟದಲ್ಲಿ ನನಗೂ ಮಂತ್ರಿ ಸ್ಥಾನ ನೀಡುವ ನಿರೀಕ್ಷೆ ಇತ್ತು. ಒಂದೊಮ್ಮೆ ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದೆ.  ಆದರೆ ಹೈಕಮಾಂಡ್ ರಾಜೀನಾಮೆ ನೀಡದಂತೆ ಸೂಚಿಸಿದೆ. ಹೀಗಾಗಿ ರಾಜೀನಾಮೆ ನಿರ್ಧಾರ ಕೈಬಿಟ್ಟಿದ್ದೇನೆ ಎಂದು ಹೇಳಿದರು.

ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಬಿಜೆಪಿಯಲ್ಲಿ ಅನುಭವಿ ಹಾಗೂ ಹಿರಿಯ ನಾಯಕನಾಗಿದ್ದೇನೆ. ಈ ಬಾರಿ ಸಚಿವ ಸಂಪುಟದಲ್ಲಿ  ನನಗೆ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಮಂತ್ರಿ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದರು.

Key words: Anand Mamani- resign -deputy speaker-minister-position-U Turn