Thursday, August 6, 2026

BDA Apartments

Home Front Page ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಸಿದ್ಧರಾಮಯ್ಯಗೆ ಲಾಭ- ರಾಜ್ಯ ಬಿಜೆಪಿ ವ್ಯಂಗ್ಯ.

ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಸಿದ್ಧರಾಮಯ್ಯಗೆ ಲಾಭ- ರಾಜ್ಯ ಬಿಜೆಪಿ ವ್ಯಂಗ್ಯ.

ಬೆಂಗಳೂರು,ಆಗಸ್ಟ್,6,2021(www.justkannada.in): ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಸಿದ್ಧರಾಮಯ್ಯಗೆ ಲಾಭ. ಸಿದ್ಧರಾಮಯ್ಯ ಅವರೇ ಇದರ ಸಂಪೂರ್ಣ ಫಲಾನುಭವಿಯಾಗಿದ್ದಾರೆ. ನೆಪ ಮಾತ್ರಕ್ಕೆ ಖಂಡಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಬಿಜೆಪಿ, ನೂರಾರು ಕೋಟಿ ಲೂಟಿ ಹೊಡೆದು ಅಕ್ರಮ ಸಂಪತ್ತು ಗಳಿಸಿರುವ ಶಾಶಕ ಜಮೀರ್ ಅಹ್ಮದ್ ಖಾನ್ ಈಗ ಇಡಿ ಬಿದ್ದಿರುವುದು ಯಾರಿಗೆ ಲಾಭ ತರಬಹುದೆಂಬುದಕ್ಕೆ ಉತ್ತರ ಲಭಿಸಿದೆ. ಮುಂದಿನ ಚುನಾವಣೆಗಾಗಿ ಸುರಕ್ಷಿತ ಕ್ಷೇತ್ರ ಅರಸುತ್ತಿರುವ ಸಿದ್ಧರಾಮಯ್ಯ ಅವರೇ ಇದರ ಸಂಪೂರ್ಣ ಫಲಾನುಭವಿಯಾಗಿದ್ದಾರೆ. ನೆಪ ಮಾತ್ರಕ್ಕೆ ಖಂಡಿಸುತ್ತಿದ್ದಾರೆ ಎಂದು ಟೀಕಿಸಿದೆ.

ಸಿದ್ದರಾಮಯ್ಯ ಅವರೇ, ಶಾಸಕ ಜಮೀರ್ ಮನೆ ಮೇಲೆ ನಡೆದ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ನೀವು ಆರೋಪಿಸುತ್ತಿದ್ದೀರಿ. ಆದರೆ, ಇಡಿ ವಿಚಾರಣೆಯಿಂದ‌ ನೆಮ್ಮದಿಯಾಗಿದೆ ಎಂದು ಜಮೀರ್‌ ಹೇಳಿದ್ದಾರೆ. ಹಾಗಾದರೆ ನಿಮ್ಮ ಹೇಳಿಕೆಯೇ ರಾಜಕೀಯ ಪ್ರೇರಿತವಲ್ಲವೇ, ಸಿದ್ದರಾಮ್ಮಯ್ಯ ಅವರೇ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

Key words: Siddaramaiah -profits -ED attack -house -MLA Jameer Ahmed-state BJP.