Tuesday, September 15, 2026

BDA Apartments

ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಬದಲಿ...
Home Front Page ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಬದಲಿಸಿ: ಸಿಎಂಗೆ ಸಿ.ಟಿ.ರವಿ ಮನವಿ

ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಬದಲಿಸಿ: ಸಿಎಂಗೆ ಸಿ.ಟಿ.ರವಿ ಮನವಿ

ಬೆಂಗಳೂರು, ಆಗಸ್ಟ್ 07, 2021 (www.justkannada.in): ಇಂದಿರಾ ಕ್ಯಾಂಟೀನ್ ಹೆಸರನ್ನು “ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಬದಲಿಸಬೇಕಾಗಿ ಸಿ.ಟಿ.ರವಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ.ರವಿ, ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಜ್ಯಾದ್ಯಂತ ಆರಂಭಿಸಲಾದ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಬೇಕೆಂದು ಕೋರಿದ್ದಾರೆ.

ಕರ್ನಾಟಕದಾದ್ಯಂತ ಇರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಶೀಘ್ರವೇ ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಆಹಾರ ಸೇವಿಸುವಾಗ, ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಕನ್ನಡಿಗರು ನೆನಪಿಸಿಕೊಳ್ಳಬೇಕಾದ ಯಾವುದೇ ಕಾರಣ ಇಲ್ಲ” ಎಂದು ಟ್ವೀಟ್ ಮಾಡಿದ್ದಾರೆ.