Sunday, August 16, 2026

BDA Apartments

Home Front Page ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ ಅನಿವಾರ್ಯ- ಶಿಕ್ಷಣ ಸಚಿವ ಬಿ.ಸಿ ನಾಗೇಶ್.

ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ ಅನಿವಾರ್ಯ- ಶಿಕ್ಷಣ ಸಚಿವ ಬಿ.ಸಿ ನಾಗೇಶ್.

ಬೆಂಗಳೂರು, ಆಗಸ್ಟ್,9,2021(www.justkannada.in):  ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ ಅನಿವಾರ್ಯ. ಶಾಲೆ ಆರಂಭಿಸುವಂತೆ ಪೋಷಕರು ಮನವಿ ಮಾಡಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಂಡು ಶಾಲೆ ಆರಂಭಿಸುತ್ತೇವೆ. ಆರಂಭದಲ್ಲಿ ಸ್ವಲ್ಪ ರಿಸ್ಕ್ ಇದ್ದರೂ ಎದರಿಸುತ್ತೇವೆ ಎಂದು ತಿಳಿಸಿದರು.

ಇನ್ನು ಇಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನ ಸಚಿವ ಬಿಸಿ ನಾಗೇಶ್ ಪ್ರಕಟಿಸಲಿದ್ದಾರೆ.

Key words: start – school – future – children-Education Minister -BC Nagesh.