Wednesday, July 29, 2026

BDA Apartments

Home Front Page ಇಂದೇ ವಿಶ್ವಾಸ ಮತಯಾಚನೆಗೆ ರಾಜ್ಯಪಾಲರ ಸೂಚನೆ ಹಿನ್ನೆಲೆ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಜತೆ ಸಿಎಂ...

ಇಂದೇ ವಿಶ್ವಾಸ ಮತಯಾಚನೆಗೆ ರಾಜ್ಯಪಾಲರ ಸೂಚನೆ ಹಿನ್ನೆಲೆ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಜತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚರ್ಚೆ..

ಬೆಂಗಳೂರು,ಜು,19,2019(www.justkannada.in):  ಇಂದೇ ವಿಶ್ವಾಸಮತಯಾಚನೆ ಮಾಡುವಂತೆ ರಾಜ್ಯಪಾಲರು ಸೂಚನೆ ನೀಡಿರುವ ಹಿನ್ನೆಲೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.

ಪದ್ಮನಾಭನಗರದಲ್ಲಿರುವ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದು ಮುಂದಿನ ನಡೆ ಬಗ್ಗೆ ತಮ್ಮ ತಂದೆಯ ಜತೆ ಮಾತುಕತೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ 1.30ರೊಳಗೆ ವಿಶ್ವಾಸ ಮತಯಾಚನೆ ಮಾಡುವಂತೆ ರಾಜ್ಯಪಾಲರು ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ಸೂಚನೆ ನೀಡಿದ್ದಾರೆ.

ಹೀಗಾಗಿ ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸುತ್ತಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯಪಾಲರ ಆದೇಶದಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ.

Key words: governor’s –instruct- confidence vote-CM HD Kumaraswamy –meet-hd devegowda