Sunday, August 16, 2026

BDA Apartments

Home Front Page ಅವಾಚ್ಯ ಶಬ್ದ ಬಳಕೆ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ.

ಅವಾಚ್ಯ ಶಬ್ದ ಬಳಕೆ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ.

ಬೆಂಗಳೂರು,ಆಗಸ್ಟ್,11,2021(www.justkannada.in):  ಕಾಂಗ್ರೆಸ್ ನಾಯಕರಿಗೆ ಅವಾಚ್ಯ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ, ಈಶ್ವರಪ್ಪ ಗೌರವಯುತ ಸ್ಥಾನದಲ್ಲಿದ್ದಾರೆ. ಸಚಿವರು ಇಷ್ಟು ಕೀಳಾಗಿ ಮಾತನಾಡಬಾರದು. ಅವರು ನೀಡಿದ ಹೇಳಿಕೆ ಖಂಡನೀಯ. ಸಿಎಂ ಬಸವರಾಜ ಬೊಮ್ಮಾಯಿ ಅವರು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಇಲ್ಲಿದಿದ್ದರೇ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Key words : Abuse-words- KPCC- Ishwar Khandre – Resigns –Minister- KS Eshwarappa