Saturday, September 19, 2026

BDA Apartments

ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂಗೆ ವರ್ತಕರ ವಿರೋಧ ಕುರಿತು ಸಚಿವ ಎಸ್.ಟಿ ಸೋಮ...
Home Front Page ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂಗೆ ವರ್ತಕರ ವಿರೋಧ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ.

ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂಗೆ ವರ್ತಕರ ವಿರೋಧ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ.

ಮಡಿಕೇರಿ,ಆಗಸ್ಟ್,20,2021(www.justkannada.in):  ಗಡಿ ಜಿಲ್ಲೆ ಹಿನ್ನೆಲೆ ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು ಇದಕ್ಕೆ ವರ್ತಕರು ವಿರೋಧ ವ್ಯಕ್ತಪಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ತೆರವು ಮಾಡುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂಗೆ ವಿರೋಧವಿದೆ.  ವರ್ತಕರ ವಿರೋಧದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ತಿಳಿಸುತ್ತೇನೆ. ಮೈಸೂರಿನಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1ರಷ್ಟಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಹೇಳಿದ್ದೇನೆ. ಕೊರೋನಾ ಪಾಸಿಟಿವ್ ರೇಟ್ ಶೇ.1ಕ್ಕಿಂತ ಕಡಿಮೆಯಾದರೇ ವೀಕೇಂಡ್ ಕರ್ಫ್ಯೂ ತೆಗೆಯಲಾಗುತ್ತದೆ ಎಂದರು.

ಸಚಿವ ಆನಂದ್ ಸಿಂಗ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ಆನಂದ್ ಸಿಂಗ್ ಗೆ ಯಾವುದೇ ಅಸಮಾಧಾನವಿಲ್ಲ. ಹೊಸ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಿಎಂ ಸಮರ್ಥರಿದ್ದಾರೆ ಎಲ್ಲವನ್ನೂ ನಿಭಾಯಿಸುತ್ತಾರೆ ಎಂದರು.

Key words: Minister- ST Somashekhar -reacted – opposition – Weekend Curfew – Mysore.