Wednesday, August 19, 2026

BDA Apartments

Home Front Page ದೇಶದ ಜನತೆಗೆ ಮೋದಿ ಸೇರಿದಂತೆ ಗಣ್ಯರಿಂದ ರಕ್ಷಾ ಬಂಧನದ ಶುಭಾಶಯ

ದೇಶದ ಜನತೆಗೆ ಮೋದಿ ಸೇರಿದಂತೆ ಗಣ್ಯರಿಂದ ರಕ್ಷಾ ಬಂಧನದ ಶುಭಾಶಯ

ಬೆಂಗಳೂರು, ಆಗಸ್ಟ್ 22, 2021 (www.justkannada.in): ರಕ್ಷಾ ಬಂಧನದ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಅಮಿತ್ ಶಾ ಸೇರಿದಂತೆ ಗಣ್ಯರು ರಕ್ಷಾ ಬಂಧನದ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

‘ಪವಿತ್ರ ರಕ್ಷಾ ಬಂಧನದ ದಿನದ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರೂ ರಕ್ಷಾ ಬಂಧನದ ಶುಭಾಶಯ ಕೋರಿದ್ದು, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಇರುವಂತೆ ನೋಡಿಕೊಳ್ಳಬೇಕೆಂದು ಜನರನ್ನು ಒತ್ತಾಯಿಸಿದ್ದಾರೆ.