Thursday, September 17, 2026

BDA Apartments

ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ: ಹಾಗೆಯೇ ಗಣೇಶೋತ್ಸವಕ್ಕೂ ಅ...
Home Front Page ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ: ಹಾಗೆಯೇ ಗಣೇಶೋತ್ಸವಕ್ಕೂ ಅವಕಾಶ ಮಾಡಿಕೊಡಿ- ಸಂಸದ ಪ್ರತಾಪ್ ಸಿಂಹ.

ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ: ಹಾಗೆಯೇ ಗಣೇಶೋತ್ಸವಕ್ಕೂ ಅವಕಾಶ ಮಾಡಿಕೊಡಿ- ಸಂಸದ ಪ್ರತಾಪ್ ಸಿಂಹ.

ಮೈಸೂರು,ಆಗಸ್ಟ್,25,2021(www.justkannada.in):  ಈ ಬಾರಿ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡ್ತಾ ಇದಾರೆ ಇಲ್ವಾ..? ಚರ್ಚ್ ಗಳಲ್ಲಿ ಸಂಡೇ ಮಾಸ್ ನಡಿತಿದ್ಯಾ ಇಲ್ವಾ.? ಅಲ್ಲಿ ಅವಕಾಶ ಮಾಡಿಕೊಟ್ಟಿದ್ದೀರಿ ಅನ್ನೊದಾದ್ರೆ ಗಣೇಶೋತ್ಸವಕ್ಕೂ ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ನಿಯಮಾವಳಿ ಕಟ್ಟುನಿಟ್ಟಿನ ಅನುಷ್ಠಾನ ಮಾಡಿ ಅವಕಾಶ ಮಾಡಿಕೊಡಿ. ಅದ್ದೂರಿಯಾಗಿ ನಡೆಯಬೇಕು ಎಂದು ಹೇಳುತ್ತಿಲ್ಲ. ಆದರೆ ಉತ್ಸವ ನಡೆಯಬೇಕು. ಬಸವರಾಜ ಬೊಮ್ಮಾಯಿ ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಿದ್ದಾರೆ ಅನ್ನೊ ವಿಶ್ವಾಸ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Key words: allow -Ganeshotsav-celebration-mysore- MP-Pratap Simha