Sunday, August 9, 2026

BDA Apartments

Home Front Page ಅಪಘಾತದಲ್ಲಿ ಗಾಯಗೊಂಡಿದ್ದವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವ ಸಿ.ಸಿ. ಪಾಟೀಲ್.

ಅಪಘಾತದಲ್ಲಿ ಗಾಯಗೊಂಡಿದ್ದವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವ ಸಿ.ಸಿ. ಪಾಟೀಲ್.

ಶಿವಮೊಗ್ಗ,ಆಗಸ್ಟ್,28,2021(www.justkannada.in): ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ಧವರ ನೆರವಿಗೆ ಧಾವಿಸಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪ ಇಂದು ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ  ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದು, ಇದೇ ಸಂದರ್ಭದಲ್ಲಿ ಅಲ್ಲಿ ತೆರಳುತ್ತಿದ್ದ ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿ ಮಾನವೀಯತೆ ಮೆರೆದರು.

ಈ ಇಬ್ಬರು ಮಹಿಳಾ ಗಾಯಾಳುಗಳನ್ನು ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸಾಗಿಸಲು ವಾಹನ ವ್ಯವಸ್ಥೆ ಮಾಡಿಸಿದ ಸಚಿವ ಸಿಸಿ ಪಾಟೀಲ್, ಇವರ ಚಿಕಿತ್ಸೆಗೆ ಸ್ಥಳದಲ್ಲೇ ಆರ್ಥಿಕ ಸಹಾಯವನ್ನು ನೀಡಿ ಸ್ಪಂದಿಸಿದರು. ಸಚಿವ ಸಿ.ಸಿ.ಪಾಟೀಲರ ಈ ಕ್ರಮಕ್ಕೆ ಸ್ಥಳೀಯರಿಂದ  ಪ್ರಶಂಸೆ ವ್ಯಕ್ತವಾಯಿತು.

Key words: Minister -C.C. Patil-shivamogga-accident-injury