Sunday, August 23, 2026

BDA Apartments

Home Front Page ಪ್ರಾಥಮಿಕ ಶಾಲೆ ಆರಂಭ: ನಾಳೆ (ಆ.30) ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ

ಪ್ರಾಥಮಿಕ ಶಾಲೆ ಆರಂಭ: ನಾಳೆ (ಆ.30) ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ

ಬೆಂಗಳೂರು, ಆಗಸ್ಟ್, 29, 2021 (www.justkannada.in): ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಶಾಲೆ ಆರಂಭದ ಕುರಿತಂತೆ ನಾಳೆ ನಿರ್ಧರವಾಗುವ ಸಾಧ್ಯತೆ ಇದೆ.

ಶಾಲೆ ಆರಂಭ ಸಂಬಂಧ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದು, ಈ ವೇಳೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ತಜ್ಞರು ಹಾಗೂ ಇಲಾಖೆ ಹಿರಿಯ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರೆ ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.