Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Crime ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು.

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು.

ಮೈಸೂರು,ಆಗಸ್ಟ್,30,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಾಮೂಹಿಕ ಅತ್ಯಾಚಾರ ನಡೆದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ನಡೆಸಿದರು.

ಮೈಸೂರಿನ ಹೊರವಲಯದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ತಮಿಳುನಾಡಿನಲ್ಲಿ ತಲೆಮರಿಸಿಕೊಂಡಿದ್ದ ಐವರು ಆರೋಪಿಗಳನ್ನ  ಪೊಲೀಸರು  ಬಂಧಿಸಿ ಕರೆತಂದು ಕೋರ್ಟ್ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದರು.

ಇದೀಗ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಆರೋಪಿಗಳನ್ನ ಸ್ಥಳಕ್ಕೆ ಕರೆತಂದು  ಸ್ಥಳ ಮಹಜರು ನಡೆಸಿದ್ದಾರೆ.

Key words: Gang rape- case –Mysore-police- accused -spot