Saturday, August 22, 2026

BDA Apartments

Home Front Page ಮುಂದಿನ ಮೂರು ದಿನ ಮಳೆ ಮುಂದುವರಿಕೆ ಸಾಧ್ಯತೆ: ವಿವಿಧೆಡೆ ಆರಂಜ್ ಅಲರ್ಟ್

ಮುಂದಿನ ಮೂರು ದಿನ ಮಳೆ ಮುಂದುವರಿಕೆ ಸಾಧ್ಯತೆ: ವಿವಿಧೆಡೆ ಆರಂಜ್ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 07, 2021 (www.justkannada.in): ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸೆ.8ರ ವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.