Sunday, August 23, 2026

BDA Apartments

Home Front Page ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿ: ಭಾರತ ಮತ್ತೆ ಅಗ್ರ ಸ್ಥಾನಕ್ಕೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿ: ಭಾರತ ಮತ್ತೆ ಅಗ್ರ ಸ್ಥಾನಕ್ಕೆ

ಬೆಂಗಳೂರು, ಸೆಪ್ಟೆಂಬರ್ 07, 2021 (www.justkannada.in): ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ಭಾರತ ಮತ್ತೆ ಅಗ್ರ ಸ್ಥಾನಕ್ಕೆ ಏರಿದೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ 157 ರನ್ ಗಳ ಅಂತರದ ಗೆಲುವು ಸಾಧಿಸಿದ ಭಾರತ ತಂಡ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಜತೆಗೆ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ಮತ್ತೆ ಅಗ್ರ ಸ್ಥಾನಕ್ಕೆ ಏರಿದೆ.

ಎರಡು ಗೆಲುವಿನೊಂದಿಗೆ 26 ಅಂಕ ಗಳಿಸಿರುವ ಟೀಂ ಇಂಡಿಯಾ 54.17 ಶೇ ಅಂಕಗಳನ್ನು ಹೊಂದಿದೆ. ಎರಡನೇ ಸ್ಥಾನದಲ್ಲಿ ಪಾಕಿಸ್ಥಾನವಿದ್ದರೆ, ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ತಂಡವಿದೆ. ಇಂಗ್ಲೆಂಡ್ ತಂಡ 29.17 % ನೊಂದಿಗೆ ಕೊನೆಯ ಅಂದರೆ ನಾಲ್ಕನೇ ಸ್ಥಾನದಲ್ಲಿದೆ.

ಇಂಗ್ಲೆಂಡ್ ತಂಡ ಕೇವಲ 210 ರನ್ ಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 157 ರನ್ ಗಳ ಅಂತರದ ಸೋಲನುಭವಿಸಿತು.