Monday, October 12, 2026

Dasara Wishes

ನರೇಂದ್ರ ಮೋದಿ ಮೆಂಟಲಿ ವೀಕ್, ಅತ್ಯಂತ ದುರ್ಬಲ ಪ್ರಧಾನಿ- ಸಚಿವ ಆರ್.ಬಿ ತಿಮ್ಮಾ...
Happy Dasara
Home Front Page ಕೈ ಪಾಳಯ ಸೇರುವುದಾಗಿ ಪ್ರಕಟಿಸಿದ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ

ಕೈ ಪಾಳಯ ಸೇರುವುದಾಗಿ ಪ್ರಕಟಿಸಿದ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ

ಬೆಂಗಳೂರು, ಸೆಪ್ಟೆಂಬರ್ 19, 2021 (www.justkannada.in): ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.

ಕೆ. ಶ್ರೀನಿವಾಸ ಗೌಡ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದರು. ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದರು. ಇದೀಗ ಕಾಂಗ್ರೆಸ್ ಸೇರುತ್ತೇನೆ ಎಂದು ಪ್ರಕಟಿಸಿದ್ದಾರೆ.

ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ ಗೌಡ ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿತ್ತು. ಇದೀಗ.ಜೆಡಿಎಸ್ ಸೇರುತ್ತೇನೆ ಎಂದು ಅವರೇ ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಶ್ರೀನಿವಾಸ್ ಗೌಡ 2018ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ 82,788 ಮತಗಳನ್ನು ಪಡೆದು ಜಯಗಳಿಸಿದ್ದರು.

key words: Srinivasa Gowda, JDS MLA from Kolar announces joining Congress