Sunday, August 2, 2026

BDA Apartments

Home Front Page 1 ರಿಂದ 5ನೇ ತರಗತಿ ಆರಂಭದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ...

1 ರಿಂದ 5ನೇ ತರಗತಿ ಆರಂಭದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ.

ಬೆಂಗಳೂರು,ಸೆಪ್ಟಂಬರ್,29,2021(www.justkannada.in):  ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

1 ರಿಂದ 5ನೇ ತರಗತಿ ಆರಂಭ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಇನ್ನು ಯಾವುದೇ ಚರ್ಚೆಯಾಗಿಲ್ಲ. ತಜ್ಞರು ಸಹ ಯಾವುದೇ ಸಲಹೆಗಳನ್ನ ನೀಡಿಲ್ಲ ಎಂದು ಹೇಳಿದರು.

ಮಾಧ್ಯಮ ಅಕಾಡೆಮಿಯ ಕ್ಲಬ್ ಹೌಸ್ ಉದ್ಘಾಟನೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಅಕಾಡೆಮಿಯ ಕ್ಲಬ್ ಹೌಸ್ ಅನ್ನ  ಉದ್ಘಾಟನೆ ಮಾಡಿದರು.  ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಹಳ್ಳಿಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಬೇಕು. ಹಳ್ಳಿಮಕ್ಕಳಿಗೆ ಗಣಿತ, ವಿಜ್ಞಾನ, ಇಂಗ್ಲೀಷ್ ಬೋಧನೆಗೆ ಒತ್ತು ಕೊಡಬೇಕು. ಪ್ರೌಢಶಾಲೆಗಳಲ್ಲಿ ತಾಂತ್ರಿಕ ಶಿಕ್ಷಣ ಕೊಡುವ ಗುರಿ ಇದೆ ಎಂದರು.

Key words: no discussion- about – beginning – class 1 to 5-  CM-Basavaraja Bommai