Sunday, September 20, 2026

BDA Apartments

ಅ.8 ರಂದು ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ BDA JK_Adv BDA Adv
Home Front Page  ಅ.8 ರಂದು ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ.

 ಅ.8 ರಂದು ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಸೆಪ್ಟಂಬರ್,30,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 8 ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 8 ರಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕಾಲ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ದೆಹಲಿ ಪ್ರವಾಸದ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಧಾರವಾಡದಲ್ಲಿ ಏಮ್ಸ್ ಮಾದರಿ ಆಸ್ಪತ್ರೆಗೆ ಪ್ರಸ್ತಾವನೆ ವಿಚಾರ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಬಳಿಕ ಬಿಜೆಪಿ ವರಿಷ್ಠರನ್ನ ಭೇಟಿ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: CM -Basavaraja Bommai – Delhi -oct 8th.