Saturday, August 22, 2026

BDA Apartments

Home Front Page ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ಘೋಷಣೆ

ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು, ಅಕ್ಟೋಬರ್ 02, 2021 (www.justkannada.in): ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅದಕ್ಕೆ ಮುನ್ನುಡಿ ಎಂಬಂತೆ ಈ ನಿರ್ಧಾರ ಕೈಗೊಂಡಿದ್ದಾರೆ.

ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ.

key words: JDS candidate announced by-election in Sindhi constituency