Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಇಂದು ಆರ್​ಸಿಬಿ v/s ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್​ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಫೈಟ್

ಇಂದು ಆರ್​ಸಿಬಿ v/s ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್​ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಫೈಟ್

ಬೆಂಗಳೂರು, ಸೆಪ್ಟೆಂಬರ್ 08, 2021 (www.justkannada.in): ಇಂದು ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕಣಕ್ಕಿಳಿಯಲಿದೆ. ಪಂದ್ಯದಲ್ಲಿ ದೊಡ್ಡ ಮೊತ್ತದ ಅಂತರದ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದೆ.

ಐಪಿಎಲ್ 2021ರ ಲೀಗ್ ಪಂದ್ಯಗಳಿಗೆ ಇಂದು ತೆರೆಬೀಳಲಿದೆ. ಮುಂದೆ ಕ್ವಾಲಿಫೈಯರ್ ಪಂದ್ಯಗಳ ರೋಚಕ ಕಾದಾಟ ಶುರುವಾಗಲಿದೆ.

ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ ಎರಡು ಪಂದ್ಯಗಳು ನಡೆಯುತ್ತಿವೆ. ಅಬುಧಾಬಿಯಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ದುಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸೆಣೆಸಾಟ ನಡೆಸಲಿವೆ.

ವಿರಾಟ್ ಕೊಹ್ಲಿ ಪಡೆ ಈ ಪಂದ್ಯದಲ್ಲಿ ಭಾರಿ ಅಂತರದಲ್ಲಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಅವಕಾಶವನ್ನು ಪಡೆದುಕೊಳ್ಳಲಿದೆ.