Thursday, August 6, 2026

BDA Apartments

Home Front Page ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ರಿತುರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ.

ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ರಿತುರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು,ಅಕ್ಟೋಬರ್,11,2021(www.justkannada.in):  ಕರ್ನಾಟಕ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ಥಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿತುರಾಜ್ ಅವಸ್ಥಿ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಿತುರಾಜ್ ಅವಸ್ಥಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ಧರಾಮಯ್ಯ, ವೀರಪ್ಪ ಮೊಯ್ಲಿ, ಸಚಿವ ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ರವಿಕುಮಾರ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Key words: Rituraj avasti- High Court –CJ- Oath