Sunday, August 16, 2026

BDA Apartments

Home Crime ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ವಂಚನೆ ಆರೋಪ: ಎಫ್ ಐಆರ್ ದಾಖಲು.  

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ವಂಚನೆ ಆರೋಪ: ಎಫ್ ಐಆರ್ ದಾಖಲು.  

ಬೆಂಗಳೂರು,ಅಕ್ಟೋಬರ್,12,2021(www.justkannada.in):  ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ವಂಚನೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹಿರಿಯ ನಾಗರಿಕರಿಗೆ ರೂ 2.8 ಕೋಟಿ ವಂಚನೆ ಎಸಗಿದ ಆರೋಪ ಕೇಳಿ ಬಂದಿದ್ದು, ಸೈಟ್, ಫ್ಲ್ಯಾಟ್ ಕೊಡುವುದಾಗಿ ಕೃಷ್ಣ ಎಂಬುವರಿಗೆ ದುಪ್ಪಟ್ಟು ಹಣ ನೀಡುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಮುನ್ನ ಇದೇ ದೂರಿಗೆ ಸಂಬಂಧಿಸಿ ಮಾಜಿ ಸಚಿವ ಕಟ್ಟಾ ವಿರುದ್ಧ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು. ಕೊನೆಗೆ ಹಿರಿಯ ನಾಗರಿಕ, ಇಂಡ್ಸಿಂಗ್ ಡೆವಲಪರ್ಸ್ ನಿರ್ದೇಶಕ ಕೃಷ್ಣ ಅವರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಸೂಚನೆಯಂತೆ ಕಟ್ಟಾ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Key words: Former minister -Katta Subramanya Naidu- cheating-FIR -Registration.