Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಮೈಸೂರಿನಲ್ಲಿ ಶಾಶ್ವತ  ವಸ್ತುಪ್ರದರ್ಶನಕ್ಕೆ ಚಿಂತನೆ..

ಮೈಸೂರಿನಲ್ಲಿ ಶಾಶ್ವತ  ವಸ್ತುಪ್ರದರ್ಶನಕ್ಕೆ ಚಿಂತನೆ..

ಮೈಸೂರು, ಅಕ್ಟೋಬರ್.16,2021(www.justkannada.in):  ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ  ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದ ಸಿಎಂ ಬೊಮ್ಮಾಯಿ, ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಾಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Key words: Thought – permanent -exhibition – Mysore ..